ಮದ್ದೂರು:ತಾಲೂಕಿನ ಹೂತಗೆರೆಯಲ್ಲಿ ಕರಡಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಗ್ರಾಮದ ಮನೆ ಯೊಂದರ ಬಳಿ ಕರಡಿ ಕಾಣಿಸಿಕೊಂಡಿದ್ದು, ಮನೆಯವರು ಕರಡಿಯನ್ನು ನೋಡಿಲ್ಲವಾದರೂ ಸಿಸಿ ಕ್ಯಾಮರಾದಲ್ಲಿ ಕರಡಿ ಅಡ್ಡಾಡುತ್ತಿರುವ ದೃಶ್ಯ ಸೆರೆಯಾಗಿದೆ.
ಮನೆಯ ಆವರಣ ಗೋಡೆಯ ಹೊರ ಭಾಗದಲ್ಲಿ ಕರಡಿ ಹಾದು ಹೋಗಿದ್ದು, ಬಯಲು ಪ್ರದೇಶದಲ್ಲಿ ಕಣ್ಮರೆಯಾಗಿದೆ. ಸಿಸಿ ಕ್ಯಾಮೆರಾ ದೃಶ್ಯಾವಳಿ ನೋಡುತ್ತಿದ್ದಾಗ ಕರಡಿ ಪ್ರತ್ಯಕ್ಷವಾಗಿರುವುದು ಮನೆಯವರಿಗೆ ಗೊತ್ತಾಗಿದ್ದು. ಕರಡಿ ಅಡ್ಡಾಡುತ್ತಿರುವ ಬಗ್ಗೆ ಗ್ರಾಮದ ಜನತೆಗೆ ವಿಚಾರ ಮುಟ್ಟಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ತಾಲೂಕಿನ ವಿವಿದೆಡೆ ಚಿರತೆ ಹಾವಳಿ ಹೆಚ್ಚಾದ ಹಿನ್ನಲೆ. ಹೊಲಗದ್ದೆಗಳಿಗೆ ಹೋಗುವ ರೈತರು ಆತಂಕ ಕೀಡಾಗಿದ್ದರು, ಇದೀಗ ಹೂತಗೆರೆಯಲ್ಲಿ ಕರಡಿ ಪ್ರತ್ಯಕ್ಷವಾಗಿರುವುದು ಜನರಲ್ಲಿ ಭೀತಿ ಮೂಡಿಸಿದೆ. ಕಾಡು ಪ್ರಾಣಿಗಳು ಗ್ರಾಮಗಳಲ್ಲಿ ಪ್ರತ್ಯಕ್ಷ ಗೊಳ್ಳುತ್ತಿರುವ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಕರಡಿ ಮತ್ತು ಚಿರತೆ ಸೆರೆಗೆ ಮುಂದಾಗಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮದ ಜನತೆ ಒತ್ತಾಯಿಸಿದ್ದಾರೆ.