ಬೆಂಗಳೂರು : ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ತರ ವರ್ತನೆ ಮಾಡುತ್ತಿದೆ ಎಂದು ಸಚಿವ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ. ಈ ವೇಳೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವೋಟ್ ಚೋರಿ ಆರೋಪಕ್ಕೆ ಅವರು ಪ್ರತಿಕ್ರಿಯೆ ನೀಡಿದರು.
ಅಳಂತದಲ್ಲಿ ಮತದಾರ ಪಟ್ಟಿಯಿಂದ ಕೈ ಬಿಟ್ಟಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ. ಅವರು ಖಚಿತ ಪಡಿಸಿಕೊಂಡು ಈ ಆರೋಪ ಮಾಡಿದ್ದಾರೆ. ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ರೀತಿ ವರ್ತನೆ ಮಾಡುತ್ತಿದೆ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.
ರಾಹುಲ್ ಗಾಂಧಿಯವರ ಜೊತೆ ಇಡೀ ದೇಶ ಇದೆ. ನಮ್ಮ ಮತ ನಮ್ಮ ಹಕ್ಕು ಹೋರಾಟ ಮಾಡ್ತೀವಿ. ಹಿಂಬಾಗಿಲಿನಿಂದ ಬಂದಿರೋ ಈ ಸರ್ಕಾರವನ್ನು ಕಿತ್ತು ಹಾಕುವವರೆಗೂ ನಾವು ಹೋರಾಟ ಮಾಡಬೇಕು ಎಂದು ಕರೆ ನೀಡಿದ್ದಾರೆ.















