ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 14 ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 7, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸಿ.
ವಿದ್ಯಾರ್ಹತೆ:
ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್/ ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್/ ಕಮ್ಯುನಿಕೇಶನ್/ ಟೆಲಿಕಮ್ಯುನಿಕೇಶನ್, ಮೆಕ್ಯಾನಿಕಲ್, ಕೆಮಿಕಲ್ ವಿಭಾಗದಲ್ಲಿ 4 ವರ್ಷಗಳ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26/12/2022
ಅರ್ಜಿ ಸಲ್ಲಿಸಲು ಕೊನೆ ದಿನ: 07/01/2023
ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು-472 ರೂ.
SC/ST/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ- ಶುಲ್ಕ ಇಲ್ಲ
ಪಾವತಿಸುವ ಬಗೆ- ಆನ್’ಲೈನ್(ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್)
ಸಂಬಳ ಎಷ್ಟು?
ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 40,000-50,000 ಸಂಬಳ ಕೊಡಲಾಗುತ್ತದೆ.
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು-32 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ
OBC ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಉದ್ಯೋಗದ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
DGM (HR/MR,MS&ADSN)
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಜಾಲಹಳ್ಳಿ P.O.
ಬೆಂಗಳೂರು 560013
ಗಮನಿಸಿ: ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲಾಗುತ್ತದೆ.














