ಮನೆ ಅಪರಾಧ ಬೆಳಗಾವಿ: ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಗೃಹಿಣಿ

ಬೆಳಗಾವಿ: ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಗೃಹಿಣಿ

0

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲ್ಲೂಕಿನ ಪಟ್ನಾಳ ಗ್ರಾಮದಲ್ಲಿ ಗೃಹಿಣಿಯೊಬ್ಬರು ತಮ್ಮ ಇಬ್ಬರು ಮಕ್ಕಳನ್ನು ನವಿಲುತೀರ್ಥ ಜಲಾಶಯದ ಹಿನ್ನೀರಿನಲ್ಲಿ ಮುಳುಗಿಸಿ ಕೊಂದು, ತಾವೂ ಆತ್ಮಹತ್ಯೆ ಶರಣಾಗಿದ್ದಾರೆ.

ರಾಮದುರ್ಗ ತಾಲ್ಲೂಕಿನ ಚುಂಚನೂರು ಗ್ರಾಮದ ಶಶಿಕಲಾ ಉರೂಫ್‌ ತನುಜಾ ಪರಸಪ್ಪ ಗೋಡಿ (32) ಮಕ್ಕಳಾದ ಸುದೀಪ (4) ರಾಧಿಕಾ (3) ಸಾವಿಗೀಡಾದವರು.

ಗೃಹಿಣಿ ಗುರುವಾರ ರಾತ್ರಿ ತಮ್ಮ ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳಗಿಸಿ ಕೊಲೆ ಮಾಡಿದರು. ಬಳಿಕ ತಾವೂ ನೀರಿಗೆ ಹಾರಿದರು. ಕುಟುಂಬದವರು ರಾತ್ರಿಯಿಡೀ ಹುಡುಕಾಡಿದರೂ ಅವರ ಪತ್ತೆಯಾಗಲಿಲ್ಲ. ಶುಕ್ರವಾರ ರಾತ್ರಿ ಶವಗಳು ಹಿನ್ನೀರಿನಲ್ಲಿ ತೇಲುತ್ತಿರುವುದನ್ನು ಕಂಡ ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಲಾಶಯದ ಬಳಿಗೆ ಯಾರಿಗೂ ಪ್ರವೇಶ ಇಲ್ಲದ ಕಾರಣ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕೌಟುಂಬಿಕ ಕಲಹದಿಂದ ಈ ಘಟನೆ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ತನಿಖೆ ಮುಂದುವರಿಸಿದ್ದೇವೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.

ಹಿಂದಿನ ಲೇಖನ600 ಮೆಗಾವ್ಯಾಟ್ ಸಾಮರ್ಥ್ಯದ  ಜಲವಿದ್ಯುತ್ ಯೋಜನೆ ದೇಶಕ್ಕೆ ಸಮರ್ಪಿಸಿದ ಪ್ರಧಾನಿ ಮೋದಿ
ಮುಂದಿನ ಲೇಖನಒಂದು ವರ್ಷದ ಬಾಲಕನ ಮೇಲೆ ಲೈಂಗಿಕ ಶೋಷಣೆ, ಕೊಲೆ: ಆರೋಪಿಗೆ ಮರಣ ದಂಡನೆ ವಿಧಿಸಿದ ಬೆಂಗಳೂರಿನ ವಿಶೇಷ ನ್ಯಾಯಾಲಯ