ಮನೆ ಅಪರಾಧ ಬೆಳಗಾವಿ: ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ- ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಳಗಾವಿ: ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ- ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ

0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರ ವಲಯದ ಪ್ರಿಯಾ ಎಕ್ಸ್‌ ಪೋರ್ಟ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟವಾಗಿ ಮೂವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ.

Join Our Whatsapp Group

ಶೋಭಾ ತೇಲಿ ಮೃತ ರ್ದುದೈವಿ. ಇಬ್ಬರ ಸ್ಥಿತಿ ಚಿಂತಾಜನಿಕವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಿಯಾ ಎಕ್ಸ್‌ಪೋರ್ಟ್ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಮತ್ತು ಸಾಂಗಲಿ ಉದ್ಯಮಿಯೊಬ್ಬರ ಸಹಭಾಗಿತ್ವದ ಮೆಕ್ಕೆಜೋಳ ಪಾಲಿಷ್ ಮಾಡಿ ಎಕ್ಸ್‌ಪೋರ್ಟ್ ಮಾಡುವ ಕಾರ್ಖಾನೆಯಾಗಿದ್ದು, ಹೈ ಪ್ರೆಶರ್​ನಿಂದ ಬಾಯ್ಲರ್ ಸ್ಪೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಬ್ಲಾಸ್ಟ್ ಆದ ತೀವ್ರತೆಗೆ ಕಾರ್ಖಾನೆಯ ಗೋಡೆ ನುಜ್ಜುಗುಜ್ಜಾಗಿದ್ದು, ಕೆಲ ಕಾಲ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇನ್ನು ಸ್ಥಳಕ್ಕಾಗಮಿಸಿ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆ ಕುರಿತು ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಲೇಖನ‘ಅನರ್ಥ’ ಸಿನಿಮಾದ ಹಾಡು, ಟೀಸರ್ ರಿಲೀಸ್​
ಮುಂದಿನ ಲೇಖನಎಲ್ಲಾ ರಂಗಗಳಲ್ಲಿ ವಿಫಲವೇ ರಾಜ್ಯ ಸರ್ಕಾರದ ಸಾಧನೆ : ಬಸವರಾಜ ಬೊಮ್ಮಾಯಿ