ಬೆಂಗಳೂರು: ರಾಜ್ಯ ಪುನರ್‌ವಿಂಗಡಣಾ ಕಾಯ್ದೆ ಪ್ರಕಾರ ಮಹಾರಾಷ್ಟ್ರಕ್ಕೆ ಸುಪ್ರೀಂಕೋರ್ಟ್’ನಲ್ಲಿ ಸೋಲಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ವ್ಯಕ್ತಪಡಿಸಿದ್ದಾರೆ.
ನಾಳೆ (ನ.23) ಸುಪ್ರಿಂಕೋರ್ಟ್’ನಲ್ಲಿ ಬೆಳಗಾವಿ ಗಡಿ ವಿವಾದ 18 ವರ್ಷಗಳ ಬಳಿಕ ವಿಚಾರಣೆಗೆ ಬರುವುದರಿಂದ, ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿ ಈ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್’ನಲ್ಲಿ ಬೆಳಗಾವಿ ಗಡಿ ವಿವಾದದ ಬಗ್ಗೆ ಹೋರಾಡಲು ರಾಜ್ಯ ಸರ್ಕಾರ ಸರ್ವಸನ್ನದ್ಧವಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದ ಪರ ತೀರ್ಪು ಬರುವಂತೆ ನಮ್ಮ ವಕೀಲರ ತಂಡವನ್ನು ಸಿದ್ಧಗೊಳಿಸಲಾಗಿದೆ ಎಂದು ಮಾಧ್ಯಮಗಳೊಂದಿಗೆ ಮಾತನಾಡುವಾಗ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ತಂಡದಲ್ಲಿ ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಶ್ಯಾಮ್ ದಿವಾನ್, ಉದಯ್ ಹೊಳ್ಳಾ, ಮಾರುತಿ ಜಿರ್ಲೆ ಇದ್ದಾರೆ. ಇವರ ಜೊತೆ ಬುಧವಾರ ಬೆಳಿಗ್ಗೆ ವಿಡಿಯೊ ಸಭೆ ಇದೆ’ ಎಂದು ಅವರು ತಿಳಿಸಿದರು.