ಮನೆ ರಾಜಕೀಯ ಬೆಳಗಾವಿ ಗಡಿ ವಿವಾದ: ಸರ್ವಪಕ್ಷಗಳ ಸಭೆ ಕರೆಯುವಂತೆ ಸಿದ್ದರಾಮಯ್ಯ ಒತ್ತಾಯ

ಬೆಳಗಾವಿ ಗಡಿ ವಿವಾದ: ಸರ್ವಪಕ್ಷಗಳ ಸಭೆ ಕರೆಯುವಂತೆ ಸಿದ್ದರಾಮಯ್ಯ ಒತ್ತಾಯ

0

ಬೆಂಗಳೂರು(Bengaluru): ಬೆಳಗಾವಿ ಗಡಿ ವಿವಾದದ ಕುರಿತು ಮಹಾರಾಷ್ಟ್ರ ಸರ್ಕಾರ ವಿಶೇಷ ಆಸಕ್ತಿ ತೋರಿಸುತ್ತಿರುವುದರಿಂದ ರಾಜ್ಯ ಸರ್ಕಾರ ತಕ್ಷಣ ಸರ್ವಪಕ್ಷಗಳ ಸಭೆ ಕರೆದು, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಬೆಳಗಾವಿ ಗಡಿ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್‌ ಇದೇ 23ರಂದು ವಿಚಾರಣೆ ನಡೆಸಲಿದೆ. ಅದನ್ನು ಎದುರಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಭರದ ಸಿದ್ಧತೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ರಾಜ್ಯ ಮಂಡಿಸಬೇಕಾದ ವಾದದ ಬಗ್ಗೆ ಸಮಾಲೋಚನೆ ನಡೆಸಲು ವಿರೋಧ ಪಕ್ಷಗಳ ಸದಸ್ಯರನ್ನು ಒಳಗೊಂಡ ಸಮಿತಿಯನ್ನು ಆ ರಾಜ್ಯ ರಚಿಸಿದೆ. ಆ ರಾಜ್ಯ ಗಡಿವಿವಾದವನ್ನು ಎಷ್ಟೊಂದು ಗಂಭೀರವಾಗಿ ಸ್ವೀಕರಿಸಿದೆ ಎನ್ನುವುದಕ್ಕೆ ಇದು ಸಾಕ್ಷಿ ಎಂದಿದ್ದಾರೆ.

ನೆಲ-ಜಲ-ಭಾಷೆಯ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗೆ ಬದ್ಧವಾಗಿ ರಾಜ್ಯ ಬಿಜೆಪಿ ಸರ್ಕಾರ ಕೈಗೊಳ್ಳುವ ಕ್ರಮಗಳನ್ನು ನಮ್ಮ ಪಕ್ಷ ಬೆಂಬಲಿಸಲಿದೆ. ಸಮಯ ವ್ಯರ್ಥ ಮಾಡದೆ‌ ಮುಖ್ಯಮಂತ್ರಿ ವಿರೋಧಪಕ್ಷಗಳ ಸಭೆ ಕರೆಯಬೇಕು ಎಂದರು.

ಹಿಂದಿನ ಲೇಖನಕರ್ನಾಟಕ– ಮಹಾರಾಷ್ಟ್ರ ಗಡಿ ವಿವಾದ: ನ.23ಕ್ಕೆ ಸುಪ್ರೀಂ ಕೋರ್ಟ್’ನಲ್ಲಿ ವಿಚಾರಣೆ
ಮುಂದಿನ ಲೇಖನ71,000 ಕ್ಕೂ ಹೆಚ್ಚು ಯುವಕರಿಗೆ ಉದ್ಯೋಗ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ