ಬೆಳಗಾವಿ(Belagavi): ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಹಳೆ ಗಾಂಧಿನಗರದಲ್ಲಿ ಬಾಲಕನ ಕುತ್ತಿಗೆಗೆ ಗಾಳಿಪಟದ ಮಾಂಜಾ ದಾರ ಸಿಲುಕಿ ಮೃತಪಟ್ಟಿದ್ದಾರೆ.
ಹತ್ತರಗಿ ಗ್ರಾಮದ ವರ್ಧನ್ ಈರಣ್ಣ ಬ್ಯಾಳಿ(6) ಮೃತಪಟ್ಟ ಬಾಲಕ.
ಹಬ್ಬಕ್ಕೆ ಬಟ್ಟೆ ಖರೀದಿಸಲು ಬಾಲಕ ವರ್ಧನ್ ತನ್ನ ತಂದೆ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಹಳೆ ಗಾಂಧಿ ನಗರದ ಬ್ರಿಡ್ಜ್ ಮೇಲೆ ಮಾಂಜಾ ದಾರ ಕುತ್ತಿಗೆಗೆ ತಗುಲಿ ಗಂಭೀರ ಗಾಯವಾಗಿದೆ. ನಂತರ ಬಾಲಕನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವರ್ಧನ್ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.














