ಮನೆ ಅಪರಾಧ ಬೆಳಗಾವಿ : ಅಪ್ರಾಪ್ತೆಯ ಮೇಲೆ ಅತ್ಯಾಚಾರ : ರಾಮಮಂದಿರ ಮಠದ ಲೋಕೇಶ್ವರ ಮಹಾರಾಜ ಸ್ವಾಮೀಜಿ ಅರೆಸ್ಟ್

ಬೆಳಗಾವಿ : ಅಪ್ರಾಪ್ತೆಯ ಮೇಲೆ ಅತ್ಯಾಚಾರ : ರಾಮಮಂದಿರ ಮಠದ ಲೋಕೇಶ್ವರ ಮಹಾರಾಜ ಸ್ವಾಮೀಜಿ ಅರೆಸ್ಟ್

0

ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಮಠದ ಲೋಕೇಶ್ವರ ಮಹಾರಾಜ ಎಂಬ ಸ್ವಾಮೀಜಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, 17 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಬೆದರಿಕೆ ನೀಡಿದ ಹಿನ್ನಲೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ.

ಪೊಲೀಸರ ಪ್ರಾಥಮಿಕ ವರದಿಗಳ ಪ್ರಕಾರ, ಮೇ 13ರಂದು ಸ್ವಾಮೀಜಿ, ಅಪ್ರಾಪ್ತ ಬಾಲಕಿಯನ್ನು ಲಾಡ್ಜ್‌ಗಳಿಗೆ ಕರೆದುಕೊಂಡು ಅತ್ಯಾಚಾರ ಎಸಗಿದ್ದಾರೆ. ಈ ಸಂದರ್ಭ ಬಾಲಕಿ ತನ್ನ ತಾಯಿ ಹಾಗೂ ಕುಟುಂಬದವರಿಗೆ ಮಾಹಿತಿ ನೀಡಿದ ನಂತರ, ಪ್ರಕರಣ ಬೆಳಕಿಗೆ ಬಂದಿದ್ದು, ಕೂಡಲೇ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಆರೋಪದ ಪ್ರಕಾರ, ಲೋಕೇಶ್ವರ ಮಹಾರಾಜ ತನ್ನ ಮಠದ ಪ್ರಭಾವ ಬಳಸಿ ಬಾಲಕಿಗೆ ನಂಬಿಕೆ ಮೂಡಿಸಿ, ಬಳಿಕ ರಾಯಚೂರು ಹಾಗೂ ಬಾಗಲಕೋಟೆಯ ಲಾಡ್ಜ್‌ಗಳಿಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿಯೇ ಎರಡು ದಿನಗಳ ಕಾಲ ಆಕೆಗೆ ಅತ್ಯಾಚಾರ ಎಸಗಿರುವುದು ವರದಿಯಾಗಿದೆ. ನಂತರ ಬಾಲಕಿಯನ್ನು ಬಾಗಲಕೋಟೆಯ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಿಟ್ಟುಹೋಗಿದ್ದಾರೆ.

ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳಾ ಠಾಣೆ ಪೊಲೀಸರು ಮೂಡಲಗಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದರು. ಸದ್ಯ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್​​ ದಾಖಲಿಸಿ ​ಜೈಲಿಗಟ್ಟಿದ್ದಾರೆ.