ಮನೆ ಅಪರಾಧ ಬಳ್ಳಾರಿ: ನೀರಿನ ಹೊಂಡದಲ್ಲಿ ಬಿದ್ದು ಮೂವರು ಸಾವು

ಬಳ್ಳಾರಿ: ನೀರಿನ ಹೊಂಡದಲ್ಲಿ ಬಿದ್ದು ಮೂವರು ಸಾವು

0

ಬಳ್ಳಾರಿ: ಸಂಡೂರು ತಾಲೂಕಿನ ತೋರಣಗಲ್ಲು‌ ಬಳಿ ಇರುವ ಜಿಂದಾಲ್ ಉಕ್ಕಿನ ಕಾರ್ಖಾನೆಯಲ್ಲಿನ ನೀರಿನ ಹೊಂಡದಲ್ಲಿ ಬಿದ್ದು ಮೂವರು ಮೃತಪಟ್ಟಿದ್ದಾರೆ.

Join Our Whatsapp Group

ಭುವನಹಳ್ಳಿ ಮೂಲದ ಜೆಡೆಪ್ಪ, ಬೆಂಗಳೂರು ಮೂಲದ ಸುಶಾಂತ, ಚೆನೈ ಮೂಲದ ಮಹಾದೇವನ್ ಮೃತ ದುರ್ದೈವಿಗಳು.

ನೀರಿನ ಹೊಂಡಕ್ಕೆ ಜೋಡಿಸಲಾಗಿದ್ದ ಪೈಪ್ ​ನಲ್ಲಿ ಸಮಸ್ಯೆ ಕಂಡು ಬಂದಿತ್ತು. ಪೈಪ್​ ರಿಪೇರಿ ಮಾಡಲು ಮೂವರು ಹೋಗಿದ್ದಾರೆ. ಪೈಪ್ ​ನಲ್ಲಿ ಬರುತ್ತಿದ್ದ ನೀರನ್ನು ನಿಲ್ಲಿಸದೆ ಹಾಗೆ ದುರಸ್ತಿ ಕಾರ್ಯ ಮಾಡುವಾಗ, ನೀರಿನ ರಭಸಕ್ಕೆ ಚನ್ನೈ ಮೂಲದ ಮಹಾದೇವನ್​​ ನೀರಿನ ಹೊಂಡದಲ್ಲಿ ಬಿದ್ದಿದ್ದಾನೆ. ಈತನನ್ನು ರಕ್ಷಿಸಲು ಹೋಗಿ ಇನ್ನಿಬ್ಬರೂ ಕೂಡ ಮೃತಪಟ್ಟಿದ್ದಾರೆ.

ತೋರಣಗಲ್ಲು‌ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಲೇಖನಪ್ರೌಢ ಶಾಲಾ ವಿದ್ಯಾರ್ಥಿನಿ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು
ಮುಂದಿನ ಲೇಖನರೇವಣ್ಣ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ಹೆಚ್ ಡಿ ಕುಮಾರಸ್ವಾಮಿ ಬೆದರಿಕೆ: ಎಸ್​​ಐಟಿಗೆ ಕಾಂಗ್ರೆಸ್ ದೂರು