ಮನೆ ರಾಜ್ಯ ಲೋಕಾಯುಕ್ತ ಬಲೆಗೆ ಬಿದ್ದ ಬೇಲೂರು ಗ್ರಾ.ಪಂ.ಕಾರ್ಯದರ್ಶಿ

ಲೋಕಾಯುಕ್ತ ಬಲೆಗೆ ಬಿದ್ದ ಬೇಲೂರು ಗ್ರಾ.ಪಂ.ಕಾರ್ಯದರ್ಶಿ

0

ಮಂಡ್ಯ:-ವ್ಯಕ್ತಿಯೊಬ್ಬರಿಂದ ಇ-ಸ್ವತ್ತು ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟು,ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ತಾಲೂಕಿನ ಬೇಲೂರು ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ಜರುಗಿದೆ.

Join Our Whatsapp Group


ತಾಲೂಕಿನ ಬೇಲೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ದಯಾನಂದ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಬಂಧಿತ ಆರೋಪಿಯಾಗಿದ್ದು,
ಲಂಚ ಸ್ವೀಕರಿಸಿದ್ದ 5 ಸಾವಿರ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇನ್ನು ಮಂಡ್ಯ ನಗರದ ಮಂಜುನಾಥ್ ಎಂಬುವರ ಮನೆ, ಖಾಲಿ ನಿವೇಶನದ ಇ-ಸ್ವತ್ತು ಮಾಡಿಕೊಡಲು‌ ದಯಾನಂದ್ 40,000 ಸಾವಿರ ರೂ.ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಮಂಜುನಾಥ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಬುಧವಾರ ಬೆಳಿಗ್ಗೆ ಗ್ರಾಮ ಪಂಚಾಯಿತಿ ಕಛೇರಿಯಲ್ಲಿ ಮುಂಗಡವಾಗಿ 5 ಸಾವಿರ ರೂಪಾಯಿ ಲಂಚ ಪಡೆಯುವ ಸಂದರ್ಭದಲ್ಲಿ,
ಲೋಕಾಯುಕ್ತ ಡಿವೈಎಸ್ಪಿ ಸುನೀಲ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.ದಾಳಿ ವೇಳೆ ಲೋಕಾಯುಕ್ತ ಇನ್ಸ್ಪೆಕ್ಟರ್ ಗಳಾದ ಪ್ರಕಾಶ್, ಬ್ಯಾಟರಾಯಗೌಡ, ಮೋಹನ್ ರೆಡ್ಡಿ ಹಾಗೂ ಸಿಬ್ಬಂದಿಗಳಾದ ಶಂಕರ್, ಶರತ್, ಮಹದೇವಯ್ಯ, ಯೋಗೇಶ್, ನಂದೀಶ್, ನಂದಿನಿ ಹಾಜರಿದ್ದರು.

ಹಿಂದಿನ ಲೇಖನನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
ಮುಂದಿನ ಲೇಖನ‘ಇದನ್ನು ಬಿಟ್ಟರೆ ಬೇರೆ ಪ್ರಕರಣಗಳಿಲ್ಲವೇ?’ ಶ್ರದ್ಧಾ ಹತ್ಯೆ ಕೇಸ್ ಕುರಿತ ಆಜ್ತಕ್ ಮನವಿಗೆ ದೆಹಲಿ ಹೈಕೋರ್ಟ್ ಕಿಡಿ