ಮನೆ ರಾಜ್ಯ ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 10 ಮಂದಿ ದುರ್ಮರಣ

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 10 ಮಂದಿ ದುರ್ಮರಣ

0

ಬೆಂಗಳೂರು: ಐಪಿಎಲ್ 2025 ಫೈನಲ್ ಗೆಲುವಿನ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವವು ಆಘಾತಕಾರಿ ತಿರುವು ಪಡೆದಿದ್ದು, ರಾಜಧಾನಿ ಬೆಂಗಳೂರಿನಲ್ಲಿ ನಡೆದ ಭಾರೀ ಕಾಲ್ತುಳಿತ ದುರಂತದಲ್ಲಿ 10 ಮಂದಿ ಅಭಿಮಾನಿಗಳು ದುರ್ಮರಣವನ್ನಪ್ಪಿದ್ದಾರೆ.

ಆರ್‌ಸಿಬಿ ತಂಡದ ಆಟಗಾರರನ್ನು ಸನ್ಮಾನಿಸುವ ಸರ್ಕಾರಿ ಕಾರ್ಯಕ್ರಮ ವಿಧಾನಸೌಧದ ಮೆಟ್ಟಿಲುಗಳ ಎದುರು ನಡೆಯುತ್ತಿತ್ತು. ಈ ಸಂದರ್ಭದಲ್ಲಿ ನಗರದ ವಿವಿಧ ಭಾಗಗಳಿಂದ ಬಂದ ಅಭಿಮಾನಿಗಳು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬೃಹತ್ ಸಂಖ್ಯೆಯಲ್ಲಿ ಸೇರಿದ್ದರು. ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಕಾಲ್ತುಳಿತದಲ್ಲಿ ಯುವಕನೋರ್ವನಿಗೆ ಕಾಲು ಮುರಿತವಾಗಿದೆ.

ಸ್ಥಳದಲ್ಲಿ 10 ಮಂದಿ ಸಾವನ್ನಪ್ಪಿರುವುದಾಗಿ ಅಧಿಕೃತ ವರದಿಯಾಗಿದೆ. 15 ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶೀಘ್ರವೇ ನಗರದ ಬೌರಿಂಗ್ ಹಾಗೂ ವೈದೇಹಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ವೈದೇಹಿ ಆಸ್ಪತ್ರೆಗೆ ದಾಖಲಾದ ಏಳು ಮಂದಿ ಗಾಯಾಳುಗಳಲ್ಲಿ ಮೂವರು ಚಿಕಿತ್ಸೆಯ ಸಮಯದಲ್ಲೇ ಮೃತರಾಗಿದ್ದಾರೆ.

ಆಭಿಮಾನದ ಹೆಸರಲ್ಲಿ ಭಾರಿ ದುರಂತ ಸಂಭವಿಸಿದ್ದು, ಅಭಿಮಾನಿಗಳ ಭದ್ರತೆಗೆ ಸಾಕಷ್ಟು ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿಲ್ಲ ಎಂಬ ಆರೋಪಗಳು ಕೂಡ ಕೇಳಿಬರುತ್ತಿದೆ.