ಮನೆ ರಾಜ್ಯ ಬೆಂಗಳೂರು: ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿದ ಪರಿಣಾಮ 8 ಬೈಕ್ ಗಳು ಭಸ್ಮ

ಬೆಂಗಳೂರು: ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿದ ಪರಿಣಾಮ 8 ಬೈಕ್ ಗಳು ಭಸ್ಮ

0

ಬೆಂಗಳೂರಿನಲ್ಲಿ ಅತ್ತಿಬೆಲೆ ಪಟಾಕಿ ಗೋದಾಮು ಬೆಂಕಿ ದುರಂತ ಪ್ರಕರಣ ಹಸಿರಾಗಿರುವಂತೆಯೇ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿದ ಪರಿಣಾಮ 8 ಬೈಕ್ ಗಳು ಸುಟ್ಟು ಭಸ್ಮವಾಗಿವೆ.

ರಾಜಧಾನಿ ಬೆಂಗಳೂರು ನಗರದ ಜೋಗುಪಾಳ್ಯದಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಜೋಗುಪಾಳ್ಯದ ಪೈಪ್ ಲೈನ್ ರಸ್ತೆಯಲ್ಲಿನ ಅಗರಬತ್ತಿ ಫ್ಯಾಕ್ಟರಿಯಲ್ಲಿ ಬೆಂಕಿ ಹತ್ತಿಕೊಂಡಿದೆ. ಬೆಂಕಿ ಕಿನ್ನಾಲೆಗೆ 8 ಬೈಕ್ ಗಳು ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ರವಿಕುಮಾರ್ ಎಂಬುವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗುಡಿ ಕೈಗಾರಿಕೆ ರೀತಿ ಕಳೆದ 5 ವರ್ಷಗಳಿಂದ ಚೋಳರಪಾಳ್ಯದ ಮನೆಯಲ್ಲೇ ಅಗರಬತ್ತಿ ಸಣ್ಣ ಕಾರ್ಖಾನೆ ನಡೆಸಲಾಗುತ್ತಿತ್ತು. ಮನೆಯ ಕೆಳ ಮಹಡಿಯಲ್ಲಿ ಅಗರಬತ್ತಿ ತಯಾರಿಕೆಗೆ ಬೇಕಾಗಿದ್ದ ದ್ರವ ರೂಪದ ರಾಸಾಯನಿಕಗಳನ್ನು ಶೇಖರಿಸಿ ಇಡಲಾಗಿತ್ತು. ಈ ಪ್ರದೇಶದಕ್ಕೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯಿಂದಾಗಿ ರಾಸಾಯನಿಕಗಳು ತುಂಬಿದ್ದ ದೊಡ್ಡ ಕ್ಯಾನ್ಗಳು ಸಿಡಿದಿವೆ. ಆ ಸಂದರ್ಭದಲ್ಲಿ ಮನೆ, ಪಕ್ಕದ ಕಟ್ಟಡ ಹಾಗೂ ರಸ್ತೆಗೂ ಬೆಂಕಿ ಆವರಿಸಿದೆ.

ಈ ಸಂದರ್ಭದಲ್ಲಿ ಮನೆ ಮುಂದೆ ನಿಲ್ಲಿಸಿದ್ದ 8 ಬೈಕ್ ಗಳು ಸುಟ್ಟು ಭಸ್ಮವಾಗಿವೆ. ಮನೆಯಲ್ಲಿದ್ದ ರವಿ ಕುಮಾರ್ ಅವರಿಗೆ ತೀವ್ರಗಾಯಗಳಾಗಿದ್ದು, ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ. ಇನ್ನು ಸ್ಥಳಕ್ಕೆ ಬಂದ 3 ಅಗ್ನಿ ಶಾಮಕ ವಾಹನಗಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿಜಯನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಈ ಘಟನೆಗೆ ಕಾರಣ ಏನು ಎಂಬುದನ್ನು ಅಗ್ನಿ ಶಾಮಕ ಸಿಬ್ಬಂದಿ ಪೊಲೀಸರು ತನಿಖೆ ನಡೆಸುತ್ತಿದ್ದು, ವಿದ್ಯುತ್ ಶಾಕ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿರವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇನ್ನು ಈ ಕಾರ್ಖಾನೆ ಪರವಾನಗಿ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.