ಮನೆ ರಾಜ್ಯ ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು ವೃದ್ಧ ಸಾವು

ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು ವೃದ್ಧ ಸಾವು

0

ಬೆಂಗಳೂರು: ಸಿಲಿಂಡರ್​ ಸ್ಫೋಟಗೊಂಡು ವೃದ್ಧ ಸಾವನ್ನಪ್ಪಿರುವ ಘಟನೆ ನಗರದ ಡೈರಿ ಸರ್ಕಲ್ ಬಳಿಯ ಮಹಾಲಿಂಗೇಶ್ ಬಡಾವಣೆಯ ಪೋಲಮಸ್​​​ ಹೋಟೆಲ್​​ ನಲ್ಲಿ ನಡೆದಿದೆ.

ಸ್ಫೋಟದ ರಭಸಕ್ಕೆ ಹೋಟೆಲ್ ಶೆಟರ್​​​ ಮುಂದೆ ಮಲಗಿದ್ದ ವೃದ್ಧ ಸಾವನ್ನಪ್ಪಿದ್ದಾರೆ. ಹೋಟೆಲ್​ನಲ್ಲಿದ್ದ ಇಬ್ಬರು ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಪೋಲಮಸ್ ಹೋಟೆಲ್ ​ನಲ್ಲಿದ್ದ ಕಮರ್ಷಿಯಲ್ ಸಿಲಿಂಡರ್ ಬ್ಲಾಸ್ಟ್ ಆಗಿದ್ದು, ಬ್ಲಾಸ್ಟ್ ತೀವ್ರತೆಗೆ ಹೋಟೆಲ್‌ ರೋಲಿಂಗ್ ಶೆಟರ್ ಮುಂದೆ ಮಲಗಿದ್ದ ವೃದ್ಧ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಸದ್ಯ ಸ್ಥಳಕ್ಕೆ ಆಡುಗೋಡಿ ಪೊಲೀಸರು, ಅಗ್ನಿಶಾಮಕ ದಳ ಭೇಟಿ ನೀಡಿ ಹೋಟೆಲ್​​ ನಲ್ಲಿ ಬೆಂಕಿ ನಂದಿಸಿದ್ದಾರೆ.

ಹಿಂದಿನ ಲೇಖನಶಾಸಕ ಡಾ.ಅಜಯ್ ಸಿಂಗ್ ನಿವಾಸದ ಆವರಣದಲ್ಲಿ ವ್ಯಕ್ತಿ ಆತ್ಮಹತ್ಯೆ
ಮುಂದಿನ ಲೇಖನಹಿಮಾಚಲ ಪ್ರದೇಶದಲ್ಲಿ ಭೂಕುಸಿತ:  ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ