ಬೆಂಗಳೂರು : ಕಳೆದ ಮಾರ್ಚ್ 21ರಂದು ಬಿಬಿಎಂಪಿ ಕಸದ ಲಾರಿ ಬೈಕ್ಗೆ ಗುದ್ದಿದ ಪರಿಣಾಮ 10 ವರ್ಷದ ಬಾಲಕ ಸ್ಥಳದಲ್ಲೇ ಸಾವನಪ್ಪಿದ್ದ ಬಳಿಕ ಸ್ಥಳೀಯರು ಆಕ್ರೋಶ ಕಂಡು ಬಿಬಿಎಂಪಿ ಕಸದ ಲಾರಿಗೆ ಬೆಂಕಿ ಹಚ್ಚಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ 10ಕ್ಕೂ ಹೆಚ್ಚು ಜನರ ವಿರುದ್ಧ FIR ದಾಖಲಾಗಿದೆ.
ಹೌದು ಬಿಬಿಎಂಪಿ ಕಸದ ಲಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 10ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ದಾಖಲಾಗಿದೆ. ಮಾರ್ಚ್ 29 ರಂದು ಕಸದ ಲಾರಿ ಬೈಕಿಗೆ ಗುದ್ಧಿದ್ದರಿಂದ 10 ವರ್ಷದ ಬಾಲಕ ಮೃತಪಟ್ಟಿದ್ದ. ಇದರಿಂದ ಆಕ್ರೋಶಗೊಂಡು ಸ್ಥಳೀಯರು ಲಾರಿಗೆ ಬೆಂಕಿ ಹಚ್ಚಿದ್ದರು. ಹಾಗಾಗಿ ಹತ್ತಕ್ಕೂ ಹೆಚ್ಚು ಜನರ ವಿರುದ್ಧ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.