ಬೆಂಗಳೂರ : ಶಕ್ತಿ ಯೋಜನೆಯ ಅಭೂತಪೂರ್ವ ಯಶಸ್ಸಿನ ಬೆನ್ನಲ್ಲೇ ಬಿಎಂಟಿಸಿ ಬಸ್‌ಗಳಲ್ಲಿ ಟಿಕೆಟ್ ಪಡೆಯಲು ಪಡುತ್ತಿರುವ ಪ್ರಯಾಣಿಕರ ಕಷ್ಟಕ್ಕೆ ಮುಕ್ತಿ ಹಾಡಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ನಮ್ಮ ಮೆಟ್ರೋ ಮಾದರಿಯಲ್ಲೇ ಆನ್‌ಲೈನ್ ಕ್ಯೂಆರ್ ಟಿಕೆಟ್ ಖರೀದಿಸುವ ಹೊಸ ಪ್ಲ್ಯಾನ್ ಜಾರಿಗೆ ಮುಂದಾಗಿದೆ. ಇದಕ್ಕೆ ಪ್ರಯಾಣಿಕರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಬಿಎಂಟಿಸಿಯಲ್ಲಿ ಪ್ರತಿದಿನ ಸುಮಾರು 40 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಾರೆ. ಹೆಚ್ಚಿನ ಜನಸಂದಣಿ ಹಿನ್ನೆಲೆ ಟಿಕೆಟ್ ಖರೀದಿ ಮಾಡಲು ತುಂಬಾ ಕಷ್ಟ ಆಗುತ್ತದೆ. ಕೆಲವೊಮ್ಮೆ ಟಿಕೆಟ್ ಖರೀದಿಸಲು ಆಗದೆ ಟಿಕೆಟ್ ಚೆಕ್ಕಿಂಗ್ ವೇಳೆ ಸಿಕ್ಕಿಬಿದ್ದು ದಂಡ ಕಟ್ಟಿರುವ ಉದಾಹರಣೆಗಳಿವೆ ಎನ್ನಬಹುದು .

ಹಾಗೂ ಮತ್ತೊಂದೆಡೆ ಪ್ರಯಾಣಿಕರು ನೀಡಿದ ಹಣವನ್ನು ಕೆಲ ಕಿಲಾಡಿ ಕಂಡಕ್ಟರ್ಗಳು ತಮ್ಮ ಯುಪಿಐ ಸ್ಕ್ಯಾನರ್ಗಳಿಗೆ ಹಾಕಿಸಿಕೊಂಡಿರುವುದು ಇದೆ. ಇದಕೆಲ್ಲಾ ಬ್ರೇಕ್ ಹಾಕಲು ಇದೀಗ ಬಿಎಂಟಿಸಿ ಮುಂದಾಗಿದ್ದು, ನಮ್ಮ ಮೆಟ್ರೋ ಮಾದರಿಯಲ್ಲಿ ಇನ್ಮುಂದೆ ಆನ್ಲೈನ್ನಲ್ಲಿ ಟಿಕೆಟ್ ಖರೀದಿಸಿ ಬಸ್ನಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗುತ್ತಿದೆ ಎನ್ನಲಾಗಿದೆ. ಈ ಬಗ್ಗೆ ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದಾರೆ. ಹಾಗೂ ಇನ್ನು ಸಂಪೂರ್ಣ ಕ್ಯಾಶ್ ಲೆಸ್, ಟಿಕೆಟ್ ಲೆಸ್ ಆಗಲು ಬಿಎಂಟಿಸಿ ಮುಂದಾಗಿದ್ದು, ಸದ್ಯದಲ್ಲೇ ಬಿಎಂಟಿಸಿಯಲ್ಲಿ ಈ ವ್ಯವಸ್ಥೆ ಜಾರಿಯಾಗಲಿದೆ. ಈಗಾಗಲೇ ಶೇ 50% ರಷ್ಟು ಪ್ರಯಾಣಿಕರು ಯುಪಿಐ ಪೇಮೆಂಟ್ ಮಾಡುವ ಮೂಲಕ ಪ್ರಯಾಣ ಮಾಡುತ್ತಿದ್ದಾರೆ.

ಆದರಿಂದ ಸುಮಾರು 20 ಲಕ್ಷದಷ್ಟು ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದರೆ, ಉಳಿದ ಪುರುಷ ಪ್ರಯಾಣಿಕರು ಹಣವನ್ನು ಕೊಟ್ಟು ಪ್ರಯಾಣ ಮಾಡುತ್ತಿದ್ದಾರೆ. ಈಗಾಗಲೇ ಇದಕ್ಕಾಗಿ 11 ಸಾವಿರ ಇಟಿಎಂ ಮೆಷಿನ್ಗಳನ್ನು ಖರೀದಿ ಮಾಡಲಾಗಿದೆ. ಇದರ ಜೊತೆಗೆ ಬಿಎಂಟಿಸಿ ಬಸ್ನಲ್ಲಿ ಎನ್ಎಂಸಿ ಕಾರ್ಡ್ ಮೂಲಕ ಪ್ರಯಾಣ ಮಾಡಲು ಅವಕಾಶ ನೀಡಲಾಗ್ತಿದೆ. ಅಂದರೆ ಎನ್ಸಿಎಂಸಿ ಕಾರ್ಡ್ ಮೂಲಕ ನಮ್ಮ ಮೆಟ್ರೋ ಮತ್ತು ಬಿಎಂಟಿಸಿ ಬಸ್ನಲ್ಲೂ ಪ್ರಯಾಣ ಮಾಡುವ ವ್ಯವಸ್ಥೆ ಮಾಡಲು ಮುಂದಾಗಿದ್ದಾರೆ ಎನ್ನಬಹುದ್ದಾಗಿದೆ.
















