ಬೆಂಗಳೂರು: ಮಧ್ಯಪ್ರದೇಶದಿಂದ ತಮಿಳುನಾಡಿನಲ್ಲಿ 9 ಮೀಟರ್ ಗಾಳಿಯ ದಿಕ್ಕಿನ ಬದಲಾವಣೆ ಹಿನ್ನೆಲೆ ರಾಜಧಾನಿ ಬೆಂಗಳೂರಿನಲ್ಲಿ 5 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿಗೆ ಇಂದಿನಿಂದ ಐದು ದಿನಕಾಲ ಮಳೆ ಇರಲಿದ್ದು, ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ, ಸೇರಿದಂತೆ ಹಲವೆಡೆ ಮಳೆಯಾಗಲಿದೆ.
ಅದೇ ರೀತಿಯಾಗಿ ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯಾತೆ ಇದೆ. ಇನ್ನು ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದ್ದು, ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.
ಈ ಹಿನ್ನೆಲೆ ಇಂದು ಮೋಡ ಕವಿದ ವಾತಾವರಣ ಹಾಗೂ ಗಾಳಿಯ ಪ್ರಮಾಣ ಹೆಚ್ಚಾಗಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯಾತೆ ಇದೆ ಎನ್ನಲಾಗುತ್ತಿದೆ.