ಮನೆ ರಾಜ್ಯ ಬೆಂಗಳೂರು : ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಚನ ಬೋಧಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಚನ ಬೋಧಿಸಿದ ಸಿಎಂ ಸಿದ್ದರಾಮಯ್ಯ

0

ಬೆಂಗಳೂರು : ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಅವರ ಹುತಾತ್ಮ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭಯೋತ್ಪಾದನೆ ವಿರುದ್ಧದ ಪ್ರತಿಜ್ಞಾ ವಚನವನ್ನು ವಿಧಾಸೌಧದ ಸಭಾಂಗಣದಲ್ಲಿ ಬೋಧಿಸಿದರು.

ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಈಶ್ವರ ಖಂಡ್ರೆ, ಸರ್ಕಾರದ ಮುಖ್ಯ ಕಾರ್ಯದರ್ಶಿ-ಡಾ. ಶಾಲಿನಿ ರಜನೀಶ್,  ನಸೀರ್ ಅಹ್ಮದ್ -ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಎಸ್. ಪೊನ್ನಣ್ಣ -ಕಾನೂನು ಸಲಹೆಗಾರ, ಶಾಸಕರಾದ ಶಿವಲಿಂಗೇಗೌಡರು ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ಸಚಿವಾಲಯದ ಸಿಬ್ಬಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.