ಬೆಂಗಳೂರು: ಐಟಿ ದಾಳಿ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲಿ ಇಡಿ ದಾಳಿಯಾಗಿದೆ. ಬೆಂಗಳೂರಿನ ಎರಡು ಕಂಪನಿಗಳ ಎಂಡಿ ಮತ್ತು ಡೈರೆಕ್ಟರ್ ಆಗಿರುವ ಉದ್ಯಮಿಯೋರ್ವರ ಕಸವಿನಹಳ್ಳಿ ಬಳಿ ಇರುವ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಉದ್ಯಮಿ ಉಷಾ ರಾಮನಾನಿ ಮನೆ ಹಾಗೂ ಕಂಪನಿಗಳ ಕಚೇರಿಗಳ ಮೇಲೆ ದಾಳಿಯಾಗಿದೆ.
ಇವರು ಹಲವು ಖಾಸಗಿ ಕಂಪನಿಗಳನ್ನು ಹೊಂದಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಒಟ್ಟು 8 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್ 17) ಬೆಳಗ್ಗೆ 5 ಗಂಟೆಗೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Saval TV on YouTube