ಮನೆ ಕಾನೂನು ಬೆಂಗಳೂರು: ಶುಶ್ರುತಿ ಸಹಕಾರ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ED ಅಧಿಕಾರಿಗಳಿಂದ 10ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ

ಬೆಂಗಳೂರು: ಶುಶ್ರುತಿ ಸಹಕಾರ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ED ಅಧಿಕಾರಿಗಳಿಂದ 10ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ

0

ಬೆಂಗಳೂರು : ಶುಶ್ರುತಿ ಸೌಹಾರ್ದ ಸಹಕಾರ ಬ್ಯಾಂಕ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆಗಳಲ್ಲಿ ED ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದೆ.

ಹೌದು ಶುಶ್ರುತಿ ಸೌಹಾರ್ದ ಸಹಕಾರ ಬ್ಯಾಂಕ್, ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನಲ್ಲಿ ಇಂದು ಬೆಳ್ಳ ಬೆಳಗ್ಗೆ ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ED ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ನಡೆಸಿ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಹಿಂದೆ ಬೆಂಗಳೂರಿನ ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್‌ನಲ್ಲಿ ಹಗರಣ ನಡೆದಿರುವ ಆರೋಪ ಕೇಳಿ ಬಂದಿತ್ತು. ಕೋಟ್ಯಂತರ ರೂಪಾಯಿ ಠೇವಣಿ ಇಟ್ಟಿದ್ದ ಹಣ ವಾಪಸ್‌ ನೀಡದೆ ಮೋಸ ಮಾಡಲಾಗಿದೆ ಎಂಬ ಆರೋಪಿಸಿ ಬ್ಯಾಂಕ್‌ನ ಅಧ್ಯಕ್ಷ ಶ್ರೀನಿವಾಸಮೂರ್ತಿ ಸೇರಿದಂತೆ ನಿರ್ದೇಶಕರ ವಿರುದ್ಧ ರಾಜಗೋಪಾಲನಗರ ಹಾಗೂ ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಗಳಲ್ಲಿ ಎಫ್‌ಐಆರ್‌ಗಳು ಕೂಡ ದಾಖಲಾಗಿದ್ದವು. ಬ್ಯಾಂಕ್‌ ಮೇಲೆ ಸಿಸಿಬಿ ದಾಳಿಯನ್ನೂ ನಡೆಸಿತ್ತು.