ಬೆಂಗಳೂರು(Bengaluru): ಘಟನೆ ಮಲ್ಲೇಶ್ವರ ಠಾಣೆ ವ್ಯಾಪ್ತಿಯಲ್ಲಿ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮಹಿಳೆಯೊಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.
ಮೇರಿ (55) ಮೃತ ದುರ್ದೈವಿ.
ಮಂತ್ರಿ ಸ್ಕ್ವೇರ್ ಮಾಲ್ ಹಿಂಭಾಗದಲ್ಲಿರುವ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸುತ್ತಿದ್ದಾರೆ.
ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯುತ್ ಶಾರ್ಟ್ ಸರ್ಕೀಟ್’ನಿಂದ ಬೆಂಕಿ ಹೊತ್ತಿಕೊಂಡಿರುವ ಅನುಮಾನವಿದ್ದು, ಬೆಸ್ಕಾಂ ಅಧಿಕಾರಿಗಳೂ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Saval TV on YouTube