ಬೆಂಗಳೂರು: ನಗರದ ಟಿ.ದಾಸರಹಳ್ಳಿಯಲ್ಲಿರುವ ಒಂದು ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಗುರುವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಎಲೆಕ್ಟ್ರಿಕ್ ಸ್ಕೂಟರ್‌ಗಳು ಬೆಂಕಿಗಾಹುತಿಯಾಗಿವೆ.
ಮನೀಷ್ ಎಂಬುವವರಿಗೆ ಸೇರಿದ್ದ ಎಲೆಕ್ಟ್ರಿಕ್ ಬೈಕ್ ಶೋರೂಂ ಆಗಿದ್ದು, ರಾತ್ರಿ ಶೋರೂಂ ಕ್ಲೋಸ್ ಮಾಡಿ ಮನೆಗೆ ತೆರಳಿದ ವೇಳೆ ಈ ಅವಘಡ ಸಂಭವಿಸಿದೆ.
ಶೋರೂಂನಲ್ಲಿದ್ದ ಎಲೆಕ್ಟ್ರಿಕ್ ಬೈಕ್‌ಗಳ ಬ್ಯಾಟರಿ ಬ್ಲಾಸ್ಟ್ ಆಗಿ ಈ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಪೀಣ್ಯಾ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗಿಲ್ಲ. ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















