ಬೆಂಗಳೂರು: ಹಸುಗೂಸು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ನಗರದ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು 20 ದಿನದ ಗಂಡು ಮಗುವನ್ನು ರಕ್ಷಣೆ ಮಾಡಿದ್ದಾರೆ.
ತಮಿಳುನಾಡು ಮೂಲದ ಕಣ್ಣನ್ ರಾಮಸ್ವಾಮಿ, ಮುರುಗೇಶ್ವರಿ, ಹೇಮಲತಾ ಹಾಗೂ ಶರಣ್ಯ ಬಂಧಿತ ಆರೋಪಿಗಳಾಗಿದ್ದಾರೆ. ಕಾರಿನಲ್ಲಿ ಬಂದು ಮಗು ಮಾರಾಟಕ್ಕೆ ಮುಂದಾದಾಗ ಆರೋಪಿಗಳು ಸಿಸಿಬಿ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಸುಮಾರು 20 ದಿನಗಳ ಗಂಡು ಮಗುವನ್ನು ರಕ್ಷಣೆ ಮಾಡಿದ ಪೊಲೀಸರು, ಆರೋಪಿಗಳು ಬಂಧಿಸಿ ವಿಚಾರಣೆ ಮಾಡುತ್ತಿದ್ದಾರೆ. ಮಕ್ಕಳಾಗದ ದಂಪತಿಗಳಿಗೆ ಲಕ್ಷಲಕ್ಷಕ್ಕೆ ಮಗುವನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗುತ್ತಿದೆ.
ಘಟನೆ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.