ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಚಂದಾಪುರ-ದೊಮ್ಮಸಂದ್ರ ಮುಖ್ಯರಸ್ತೆಯ ರೈಲ್ವೆ ಸ್ಟೇಷನ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸೂರ್ಯ ನಗರ ಪೊಲೀಸರು ಬಂಧಿಸಿದ್ದಾರೆ.
ಈ ವೇಳೆ ಆನೇಕಲ್ನ ಚನ್ನಕೇಶವ ನಗರದ ಅಭಿ(19), ತರಣ್(20), ಸೂರ್ಯ(21), ಹರ್ಷ (21) ಎಂಬುವವರನ್ನು ಬಂಧಿಸಲಾಗಿದೆ.
ಆರೋಪಿಗಳು ಗಾಂಜಾವನ್ನು ತಂದು ಸಣ್ಣ ಸಣ್ಣ ಪ್ಯಾಕೆಟ್ ಗಳನ್ನಾಗಿ ಮಾಡಿ ಚಂದಾಪುರದ ಹೀಲಲಿಗೆ ಸಮೀಪದ ಕಾಲೇಜು ಯುವಕ ಯುವತಿಯರಿಗೆ ಮಾರಾಟ ಮಾಡುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ಸೂರ್ಯನಗರ ಪೊಲೀಸರು ದಾಳಿ ಮಾಡಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್ನು ಬಂಧಿತ ಆರೋಪಿಗಳಿಂದ ಲಕ್ಷಾಂತರ ರೂ ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.
ಈ ಕುರಿತು ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Saval TV on YouTube