ಮನೆ ಸುದ್ದಿ ಜಾಲ ಬೆಂಗಳೂರು : ಏರ್​ಪೋರ್ಟ್​​ನಲ್ಲಿ 1.37 ಕೋಟಿ ಮೌಲ್ಯದ ಚಿನ್ನ ವಶಕ್ಕೆ

ಬೆಂಗಳೂರು : ಏರ್​ಪೋರ್ಟ್​​ನಲ್ಲಿ 1.37 ಕೋಟಿ ಮೌಲ್ಯದ ಚಿನ್ನ ವಶಕ್ಕೆ

0

ದೇವನಹಳ್ಳಿ (ಜೂನ್​​ 10) : ಕಳೆದ ಕೆಲ ದಿನಗಳಿಂದ ಮಾದಕ ವಸ್ತು ಸಾಗಾಟ ಪ್ರಕರಣಗಳನ್ನು ಮೇಲಿಂದ ಮೇಲೆ ಭೇದಿಸುತ್ತಿದ್ದ ಬೆಂಗಳೂರಿನ ಕಸ್ಟಮ್ಸ್​​ ಅಧಿಕಾರಿಗಳು ಇದೀಗ ದೊಡ್ಡ ಮೊತ್ತದಲ್ಲಿ ಅಕ್ರಮ ಸಾಗಾಟ ನಡೆಸುತ್ತಿದ್ದ ಚಿನ್ನವನ್ನು ಜಪ್ತಿ ಮಾಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಈ ಕುರಿತು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದಿದ್ದ ಪ್ರಯಾಣಿಕನ ಬಳಿಯಿದ್ದ 1.37 ಕೋಟಿ ಮೌಲ್ಯದ 24 ಕ್ಯಾರೆಟ್​​ನ 899.50 ಗ್ರಾಂ ಬಂಗಾರವನ್ನು ವಶಕ್ಕೆ ಪಡೆಯಲಾಗಿದೆ. ಆ ಮೂಲಕ ಆರೋಪಿಯ ಕಳ್ಳಾಟವನ್ನು ಅಧಿಕಾರಿಗಳು ಬಯಲಿಗೆಳೆದಿದ್ದಾರೆ.

ಹಾಗೂ ಇನ್ನು ಚಿನ್ನದ ಸಾಗಾಟಕ್ಕೆ ಆರೋಪಿ ಸಖತ್​​ ಪ್ಲ್ಯಾನ್​​ ಮಾಡಿದ್ದ. ನಾಲ್ಕು ಕ್ಯಾಪ್ಸುಲ್‌ಗಳಲ್ಲಿ ಚಿನ್ನದ ಪೇಸ್ಟ್ ಅಡಗಿಸಿ ಸಾಗಟಕ್ಕೆ‌ ಯತ್ನಿಸಿದ್ದ. ಆದರೆ ಅನುಮಾನಾಸ್ಪದ ವರ್ತನೆ ಹಿನ್ನೆಲೆ ಅಧಿಕಾರಿಗಳು ತಪಾಸಣೆ ನಡೆಸಿದಾಗ ಚಿನ್ನ ಕಳ್ಳಸಾಗಣೆ ವಿಚಾರ ಬಹಿರಂಗಗೊಂಡಿದೆ. ಕಸ್ಟಮ್ಸ್ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆ ಮುಂದುವರಿದಿದೆ ಎಂಬುದ್ದಾಗಿದೆ.‌