ಮನೆ ಹವಮಾನ ಬೆಂಗಳೂರು: ಜಿಲ್ಲೆಯಾದ್ಯಂತ ಹಲವೆಡೆ ಭಾರೀ ಮಳೆ

ಬೆಂಗಳೂರು: ಜಿಲ್ಲೆಯಾದ್ಯಂತ ಹಲವೆಡೆ ಭಾರೀ ಮಳೆ

0

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆ ಆರ್ಭಟ ಮುಂದುವರೆದಿದೆ. ನಗರದ ಹಲವೆಡೆ ಮರಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

Join Our Whatsapp Group

ಬೆಂಗಳೂರಿನ ಟೌನ್ ಹಾಲ್, ಕೆ.ಆರ್.ಮಾರ್ಕೆಟ್, ಮಲ್ಲೇಶ್ವರಂ, ಬಸವೇಶ್ವರ ನಗರ, ಗೋವಿಂದರಾಜ ನಗರ, ಗಿರಿನಗರ, ವಿಜಯನಗರ, ಚಾಮರಾಜಪೇಟೆ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಮಳೆಯಿಂದ ರಸ್ತೆಗಳೆಲ್ಲ ತುಂಬಿದ್ದು, ಸವಾರರು ಹೈರಾಣಾಗಿದ್ದಾರೆ.

ತುಮಕೂರು ಜಿಲ್ಲೆಯಾದ್ಯಂತ ಎರಡು ಗಂಟೆಗಳ ಕಾಲ ಮಳೆಯಾಗಿದೆ. ಮಳೆಯಿಂದ ನಗರದ ಅಂತರಸನಹಳ್ಳಿ ಅಂಡರ್ ಪಾಸ್ ಜಲಾವೃತ್ತವಾಗಿತ್ತು. ಚಿತ್ರದುರ್ಗದ ಹಲವೆಡೆ ಮಳೆ ಸುರಿದಿದ್ದು, ಹಿರಿಯೂರು ತಾಲೂಕಿನ ಟಿಬಿ ವೃತ್ತದ ರಸ್ತೆ ಮಳೆ ನೀರಿನಿಂದ ಮುಚ್ಚಿ ಹೋಗಿತ್ತು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸುರಿದ ಮಳೆ ಅವಾಂತರ ಸೃಷ್ಟಿಸಿದೆ. ಚಿಂತಾಮಣಿಯ ಈಶ್ವರ ದೇವಸ್ಥಾನ ಹಿಂಭಾಗದ ಮನೆಗೆ ಚರಂಡಿ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.

ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿದೆ, ಜೂನ್ ೧೦ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಿಂದಿನ ಲೇಖನಗೋಡೆ ಮೇಲಿನ ಬೆಕ್ಕು ಪೋಷಣೆ
ಮುಂದಿನ ಲೇಖನದಕ್ಷಿಣ ಶಿಕ್ಷಕರ ಕ್ಷೇತ್ರ: ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಗೆಲುವು