ಬೆಂಗಳೂರು: ಜ್ಯುವೆಲ್ಲರಿ ಅಂಗಡಿ ಮಾಲೀಕರು, ಗುತ್ತಿಗೆದಾರರ ಮನೆ-ಕಚೇರಿಗಳ ಮೇಲೆ ಇತ್ತೀಚೆಗೆ ದಾಳಿ ನಡೆಸಿದ್ದು ಆದಾಯ ತೆರಿಗೆ ಇಲಾಖೆ (ಐಟಿ), ಇಂದು ಆಹಾರ ಉದ್ಯಮಗಳ ಮೇಲೆ ದಾಳಿ ನಡೆಸಿ, ಕಡತಗಳ ಪರಿಶೀಲನೆ ನಡೆಸುತ್ತಿದೆ.
ರಾಜಾಜಿನಗರದ ಇಂಡಸ್ಟ್ರಿಯಲ್ ಎಸ್ಟೇಟ್ ಬಳಿಯಿರುವ ಪಿ.ಎಸ್.ಆಗ್ರೋ ಫುಡ್ ಎಲ್ ಎಲ್ ಪಿ ಕಾರ್ಖಾನೆ, ಬಿ.ವಿ.ಕೆ.ಅಯ್ಯಂಗಾರ್ ರಸ್ತೆಯಲ್ಲಿರುವ ಮಾಣಿಕ್ ಮೇವಾ ಸ್ಟೋರ್ ಮೇಲೆ ದಾಳಿ ನಡೆದಿದೆ.
ಈ ಎರಡು ಆಹಾರ ಕಂಪನಿಗಳು ಒಣ ಹಣ್ಣುಗಳ ವ್ಯಾಪಾರ ನಡೆಸುತ್ತಿವೆ. ಆದಾಯಕ್ಕೆ ಪ್ರತಿಯಾಗಿ ತೆರಿಗೆ ಪಾವತಿಸದ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳಗಿನ ಜಾವ ಸುಮಾರು 10ಕ್ಕೂ ಹೆಚ್ಚು ಕಾರುಗಳಲ್ಲಿ ಆಗಮಿಸಿದ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.