ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬುಧವಾರ ರಾತ್ರಿ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ನಡೆದಿದೆ.
ಕೋಣನಕುಂಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸಹದೇವ್ ಕೊಲೆಯಾದ ವ್ಯಕ್ತಿ.
ಟೀ ಕುಡಿಯಲು ಬೇಕರಿ ಬಳಿ ಬಂದಿದ್ದಾಗ ಮೂರು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ದುಷ್ಕರ್ಮಿಗಳ ಗುಂಪು, ಸಹದೇವ್ ಮೇಲೆ ಹಲ್ಲೆ ಮಾಡಿ ಹತ್ಯೆಗೈದು ಪರಾರಿಯಾಗಿದೆ.
ಘಟನಾ ಸ್ಥಳಕ್ಕೆ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಡಿದ್ದಾರೆ.
ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೃತ್ಯ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.