ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಚಿರತೆಯ ಆತಂಕ ಹೆಚ್ಚಾಗಿದೆ. ಇತ್ತೀಚೆಗೆ ಕೆಲವು ದಿನಗಳು ಶಾಂತವಾಗಿದ್ದರೂ, ಇಂದು ಬೆಳಿಗ್ಗೆ ತಲಘಟ್ಟಪುರ ಸಮೀಪದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಈ ಘಟನೆಯಿಂದ ಸ್ಥಳೀಯ ನಿವಾಸಿಗಳಲ್ಲಿ ಭಯ ಮನೆಮಾಡಿಕೊಂಡಿದೆ.
ಚಿರತೆಯು ನಿವಾಸಿ ಪ್ರದೇಶದ ಬಳಿ ಓಡಾಡುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿ ತಕ್ಷಣ ಸ್ಥಳಕ್ಕಾಗಮಿಸಿ ಚಿರತೆಯನ್ನು ಹಿಡಿಯಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಬೆಳಿಗ್ಗೆಯಿಂದಲೇ ಈ ಕಾರ್ಯಾಚರಣೆ ನಡೆಯುತ್ತಿದ್ದು, ಯಾವುದೇ ಅಪಾಯವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಅರಣ್ಯ ಇಲಾಖೆಯ ಮೂಲಗಳ ಪ್ರಕಾರ, ಸಂಜೆಯ ಬಳಿಕ ಚಿರತೆಯ ಚಲನೆ ಹೆಚ್ಚು ನಡೆಯಬಹುದೆಂದು ನಿರೀಕ್ಷಿಸಿ, ಪಟಾಕಿ ಸಿಡಿಸುವ ಮೂಲಕ ಅದನ್ನು ಸೆರೆಹಿಡಿಯಲು ಯೋಜನೆ ರೂಪಿಸಲಾಗಿದೆ.














