ಬೆಂಗಳೂರು(Bengaluru): ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಪ್ಲೈ ಓವರ್’ನಿಂದ ಬೈಕ್ ಕೆಳಗೆ ಬಿದ್ದಿದ್ದು, ಇಬ್ಬರು ಸವಾರರು ಮೃತಪಟ್ಟಿದ್ದಾರೆ.
ಉತ್ತರ ಭಾರತ ಮೂಲದ ವಿಕ್ರಮ್(28), ಅಮಿತ್ ಸಿಂಗ್(27) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇನ್ನೊಬ್ಬ ವ್ಯಕ್ತಿ ಸೌರಭ್(27) ಸ್ಥಿತಿ ಗಂಭೀರವಾಗಿದ್ದು, ಆತನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇವರು ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ನಲ್ಲಿ ನೆಲೆಸಿದ್ದರು ಎಂದು ಹೇಳಲಾಗಿದೆ. ಫ್ಲೈಓವರ್ ತಡೆಗೋಡೆಗೆ ಬೈಕ್ ಸವಾರರು ಡಿಕ್ಕಿ ಹೊಡೆದು ಇಬ್ಬರು ಬೈಕ್ ಪ್ಲೈ ಓವರ್ನಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮರಣೋತ್ತರ ಪರೀಕ್ಷೆಗಾಗಿ ಯಲಹಂಕ ಸರ್ಕಾರಿ ಆಸ್ಪತ್ರೆಗೆ ಈ ಇಬ್ಬರ ಮೃತದೇಹವನ್ನು ಸ್ಥಳಾಂತರ ಮಾಡಲಾಗಿದೆ.
ಈ ಕುರಿತು ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















