ಬೆಂಗಳೂರು: ಅಪಾರ್ಟ್ ಮೆಂಟ್ ಮೇಲಿಂದ ಬಿದ್ದು ಮಹಿಳೆ ಮೃತಪಟ್ಟಿರುವ ಘಟನೆ ಬೆಂಗಳೂರಿನ ಯಲಹಂಕ ಬಳಿಯ ನಾಗೇನಹಳ್ಳಿಯಲ್ಲಿ ನಡೆದಿದೆ.
ಅಮೃತಾ ಶರ್ಮ 27 ಮೃತಪಟ್ಟ ಯುವತಿ.
ಈಕೆ ಲಖನೌ ಮೂಲದ ಮಹಿಳೆ ಕುಟುಂಬದ ಜೊತೆ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ವಾಸವಿದ್ದಳು. ಆದ್ರೆ, ನಿನ್ನೆ (ಜೂನ್ 22) ರಾತ್ರಿ ಹತ್ತು ಗಂಟೆ ಸುಮಾರಿಗೆ ಏಕಾಏಕಿ ಅಪಾರ್ಟ್ ಮೆಂಟ್ ಹತ್ತನೇ ಮಹಡಿಯಿಂದ ಜಿಗಿದಿದ್ದಾಳೆ.
ಸ್ಥಳೀಯರು ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ದುರದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಅಮೃತಾ ಶರ್ಮ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸದ್ಯ ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಅಂಬೇಡ್ಕರ್ ಅಸ್ಪತ್ರೆಗೆ ರವಾನಿಸಲಾಗಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತಿದ್ದ ಈಕೆ ಎರಡು ವರ್ಷದ ಹಿಂದೆ ವಿವಾಹವಾಗಿದ್ದಳು. ಅಲ್ಲದೇ ಇತ್ತೀಚಿಗೆ ತನ್ನ ತಂದೆಯನ್ನು ಕಳೆದುಕೊಂಡು ನೋವಿನಲ್ಲಿದ್ದರು ಎಂದು ತಿಳಿದು ಬಂದಿದೆ.
Saval TV on YouTube