ಚಿತ್ರದುರ್ಗ: ಲಂಚ ಪಡೆಯುತ್ತಿದ್ದ ವೇಳೆ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಚಿತ್ರದುರ್ಗದ ಹೊಸದುರ್ಗದಲ್ಲಿ ಬೆಸ್ಕಾಂ ಎಎಇ ತಿರುಪತಿ ನಾಯ್ಕ್ ಎಂಬುವವರು ವಿದ್ಯುತ್ ಗುತ್ತಿಗೆದಾರರ ಬಳಿ ಸರ್ವೀಸ್ ಕನೆಕ್ಷನ್’ಗಾಗಿ 20 ಸಾವಿರ ರೂ. ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಪೈಕಿ 10 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ ಪಿ ವಾಸುದೇವ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ಪರಿಶೀಲನೆ ನಡೆಸಿದ್ದಾರೆ.