ಕುಣಿಗಲ್: ಕಾರು ಮರಕ್ಕೆ ಡಿಕ್ಕಿ ಹೊಡೆದು ಬಳಿಕ ಪಲ್ಟಿಯಾಗಿ ಬೆಸ್ಕಾಂ ನೌಕರರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಜ್ಯ ಹೆದ್ದಾರಿ 33 ಟಿ.ಎಂ ರಸ್ತೆ ತಾಲೂಕಿನ ಪದೊಡ್ಡಮಾವತ್ತೂರು ಬಳಿ ಡಿ.28ರ ಶನಿವಾರ ಸಂಭವಿಸಿದೆ.
ತುಮಕೂರು ಜಿಲ್ಲೆಯ ತಿಪಟೂರು ನಗರದ ಸ್ಟೆಲ್ಲಾ ಮೇರಿಸ್ ಸ್ಕೂಲ್ ವಿದ್ಯಾನಗರ ನಿವಾಸಿ, ಕಾರು ಚಾಲಕ ಸಿ.ಎನ್ ಹರೀಶ್ (37) ಮೃತಪಟಟ್ವರು.
ಬೆಸ್ಕಾಂ ನೌಕರರ ಹರೀಶ್ ಕಾರು ಚಾಲನೆ ಮಾಡಿಕೊಂಡು ತಿಪಟೂರಿನಿಂದ ಕುಣಿಗಲ್ ಮಾರ್ಗವಾಗಿ ಮೈಸೂರು ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು, ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು ನಂತರ ತೆಂಗಿನ ಮರಕ್ಕೆ ರಸಭವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿ ಚಾಲಕ ಹರೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಅಮೃತ್ತೂರು ವೃತ್ತ ನಿರೀಕ್ಷಕ ಮಾದ್ಯಾನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.














