ಮನೆ ರಾಜ್ಯ ಡಾ.ಕೆ.ಎಚ್.ಪ್ರಸಾದ್ ಗೆ ಅತ್ಯುತ್ತಮ ಜಿಲ್ಲಾ ಆರೋಗ್ಯ ಅಧಿಕಾರಿ ಪ್ರಶಸ್ತಿ

ಡಾ.ಕೆ.ಎಚ್.ಪ್ರಸಾದ್ ಗೆ ಅತ್ಯುತ್ತಮ ಜಿಲ್ಲಾ ಆರೋಗ್ಯ ಅಧಿಕಾರಿ ಪ್ರಶಸ್ತಿ

0

ಬೆಂಗಳೂರು: ರಾಜ್ಯ ವೈದ್ಯ ದಿನಾಚರಣೆ ಅಂಗವಾಗಿ ಆರೋಗ್ಯ ನಡೆದ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಕೆ.ಎಚ್.ಪ್ರಸಾದ್ ಅವರಿಗೆ ರಾಜ್ಯದ ಅತ್ಯುತ್ತಮ ಜಿಲ್ಲಾ ಆರೋಗ್ಯ ಅಧಿಕಾರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Join Our Whatsapp Group

ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಯ ಸಿದ್ದರಾಮಯ್ಯ ಅವರು, ಪ್ರಸಾದ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಆರೋಗ್ಯ ದಿನಾಚರಣೆ ಅಂಗವಾಗಿ ಆರೋಗ್ಯ ಇಲಾಖೆಯ ವಿವಿಧ ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿದವರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದ್ದು, ಪ್ರಸಾದ್ ಅವರು ಉತ್ತ, ಡಿಎಚ್ ಒ ಪ್ರಶಸ್ತಿ ಪಡೆದ ರಾಜ್ಯದ ಏಕೈಕ ಅಧಿಕಾರಿ ಆಗಿದ್ದಾರೆ.

ಪ್ರಸಾದ್ ಅವರು ಕೇಂದ್ರ ಸರ್ಕಾರದ ಆಯುಷ್  ಡಿಜಿಟಲ್ ಮಿಷನ್ ಮತ್ತು ಸರ್ಕಾರದ ಾರೋಗ್ಯ ಅಭಿಯಾನ ಕಾರ್ಯಕ್ರಮಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ಹಾಗೆಯೇ ಮೈಸೂರು ಜಿಲ್ಲೆಯಲ್ಲಿ ನಡೆಯುವ ಒಟ್ಟಾರೆ ಹೆರಿಗೆಗಳಲ್ಲಿ ಶೇ.75 ರಷ್ಟು ಸರ್ಕಾರಿ ಆಸ್ಪತ್ರೆಗಳಲ್ಲೇ ನಡೆಯುವಂತೆ ಉತ್ತಮ ಸೌಲಭ್ಯ ಕಲ್ಪಿಸಿ ಮೆಚ್ಚುಗೆ ಪಡೆದಿದ್ದಾರೆ.