ಚಿತ್ರದುರ್ಗ(Chitradurga): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆ ಸೋಮವಾರ ಕೋಟೆನಾಡು ಪ್ರವೇಶಿಸಿದೆ.
ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು, ಕೆಂಕೆರೆ ಮಾರ್ಗದಲ್ಲಿ ಸೋಮವಾರ ಬೆಳಿಗ್ಗೆ ಪಾದಯಾತ್ರೆ ನಡೆಸಿದ ರಾಹುಲ್, ವಾಹನದಲ್ಲಿ ಹಿರಿಯೂರು ತಲುಪಿದರು. ವಿಶೇಷ ವಾಹನದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಅವರನ್ನು ಕಾಂಗ್ರೆಸ್ ನಾಯಕರು ಭೇಟಿ ಮಾಡಿ ಚರ್ಚಿಸಿದರು.
ಸಂಜೆ 4ಕ್ಕೆ ಹಿರಿಯೂರಿನ ತಹಾ ಪ್ಯಾಲೇಸ್ ಖಾಸಗಿ ಕಲ್ಯಾಣ ಮಂಪಟದಿಂದ ಪಾದಯಾತ್ರೆ ಆರಂಭವಾಗಲಿದೆ. ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲು ಸಾವಿರಾರು ಜನರು ಧಾವಿಸುತ್ತಿದ್ದಾರೆ. ಬಾಲೇನಹಳ್ಳಿ ಗೇಟ್‌ವರೆಗೆ ಪಾದಯಾತ್ರೆ ಸಾಗಲಿದ್ದು, ಹರ್ತಿಕೋಟೆ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಧ್ಯಕ್ಷ ಸಲೀಂ ಅಹಮ್ಮದ್, ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲಿದ್ದಾರೆ.