ಮೈಸೂರು: ಸಂಸದ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸುವ ಸಂಬಂಧ ಪಕ್ಷದ ನಾಯಕಿ ಸೋನಿಯಾ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಸೋಮವಾರ ಮಧ್ಯಾಹ್ನ ವಿಶೇಷ ವಿಮಾನದಲ್ಲಿ ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ಈ ವೇಳೆ ಹಾಜರಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪಕ್ಷದ ಮೈಸೂರು ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಬಿ.ಜೆ.ವಿಜಯಕುಮಾರ್, ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ ಸೇರಿದಂತೆ ಮುಖಂಡರು ಇಬ್ಬರಿಗೂ ಸ್ವಾಗತ ಕೋರಿದರು.
ಇದಕ್ಕೂ ಮುನ್ನಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬಿಜೆಪಿಯವರು ಅವರ ನಾಯಕರ ನಡುವೆ ಜೋಡೊ ಮಾಡಿಕೊಳ್ಳಲಿ. ನಾನು- ಸಿದ್ದರಾಮಯ್ಯ ಒಂದಾಗಿದ್ದೇವೆ. ಈಶ್ವರಪ್ಪ ಸಚಿವ ಸ್ಥಾನಕ್ಕಾಗಿ ಕಣ್ಣೀರು ಹಾಕುತ್ತಿದ್ದಾರೆ ಎಂದು ಟೀಕಿಸಿದರು’ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೊ ಯಾತ್ರೆ ಯಶಸ್ವಿಯಾಗಿ ನಡೆಯುತ್ತಿದ್ದು, ಇದೇ 6ರಂದು ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಕೂಡ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಭಾರತ್ ಜೋಡೋ ಯಾತ್ರೆ: ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ
Saval TV on YouTube