ಬೆಂಗಳೂರು: ಬೀದರ್ನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದಲ್ಲಿ ಗುತ್ತಿಗೆ ಆಧಾರದ ಮೇಲೆ ಮುಖ್ಯ ಪ್ರಧಾನ ವ್ಯವಸ್ಥಾಪಕರ ಹುದ್ದೆ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಯ ವಿವರ: ಮುಖ್ಯ ಪ್ರಧಾನ ವ್ಯವಸ್ಥಾಪಕರು (ಸಿಜಿಎಂ) – 1
ಅರ್ಹತೆ: ಅಭ್ಯರ್ಥಿಗಳು ಎಂ.ಕಾಂ, ಎಂಬಿಎ, ಅರ್ಥಶಾಸ್ತ್ರದಲ್ಲಿ ಎಂಎ ಪದವಿ ಹೊಂದಿರಬೇಕು. ಕನಿಷ್ಠ 10ರಿಂದ 15 ವರ್ಷ ಬ್ಯಾಂಕಿಂಗ್, ಹಣಕಾಸು ಕ್ಷೇತ್ರದಲ್ಲಿ ಹುದ್ದೆ ನಿರ್ವಹಿಸಿದ ಅನುಭವ ಇರಬೇಕು.
ಆಯ್ಕೆ ಪ್ರಕ್ರಿಯೆ: ಸಂದರ್ಶನದ ಮೂಲಕ ಆಯ್ಕೆ.
ಅರ್ಜಿ ಸಲ್ಲಿಕೆ: ಅಧಿಕೃತ ಅಧಿಸೂಚನೆಯ ಜೊತೆಗೆ ನೀಡಲಾಗಿರುವ ನಿಗದಿತ ಅರ್ಜಿ ಭರ್ತಿ ಮಾಡಿ, ಅರ್ಜಿ ಶುಲ್ಕದ ಡಿ.ಡಿಯೊಂದಿಗೆ ಅಂಚೆ ಮೂಲಕ ಸಲ್ಲಿಸಬೇಕು. ಸಾಮಾನ್ಯ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 2,000 ರೂ ಹಾಗೂ ಪ.ಜಾ, ಪ.ಪಂ ಹಾಗೂ ಪ್ರವರ್ಗ 1 ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 1,000 ರೂ ಅರ್ಜಿ ಶುಲ್ಕವಿದೆ.
ಅರ್ಜಿ ಸಲ್ಲಿಕೆ ವಿಳಾಸ: ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಬೀದರ್ ಕೇಂದ್ರ ಕಚೇರಿ, ಬಸವೇಶ್ವರ ಚೌಕ, ಬೀದರ್- 585 401
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕಡೇಯ ದಿನಾಂಕ ಮಾರ್ಚ್ 6. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು dccbank_bdr@yahoo.co.in ಇಲ್ಲಿಗೆ ಭೇಟಿ ನೀಡಿ.















