ಮನೆ ಸುದ್ದಿ ಜಾಲ ಪೋಕ್ಸೋ ಕೇಸ್‌ನಲ್ಲಿ ಬಿಗ್‌ ರಿಲೀಫ್‌ – ಮುರುಘಾ ಶ್ರೀ ನಿರ್ದೋಷಿ

ಪೋಕ್ಸೋ ಕೇಸ್‌ನಲ್ಲಿ ಬಿಗ್‌ ರಿಲೀಫ್‌ – ಮುರುಘಾ ಶ್ರೀ ನಿರ್ದೋಷಿ

0

ಚಿತ್ರದುರ್ಗ : ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ ಎಂದು ಕೋರ್ಟ್‌ ತೀರ್ಪು ನೀಡಿದೆ.

2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 3 ವರ್ಷಗಳ ಸುದೀರ್ಘ ತನಿಖೆ ಬಳಿಕ ಚಿತ್ರದುರ್ಗದ 2ನೇ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯದ ನ್ಯಾ.ಗಂಗಾಧರಪ್ಪ ಚನ್ನಬಸಪ್ಪ ಹಡಪದ್ ಅವರಿದ್ದ ಪೀಠ ನಿರ್ದೋಷಿ ಅಂತ ತೀರ್ಪು ಪ್ರಕಟಿಸಿದೆ. ಇದರೊಂದಿಗೆ ಮೊದಲ ಪ್ರಕರಣ ಖುಲಾಸೆಯಾಗಿದ್ದು, ಮತ್ತೊಂದು ಪ್ರಕರಣದ ವಿಚಾರಣೆ ಮುಂದುವರಿಯಲಿದೆ.