ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಸಿಬಿಐ ತನಿಖೆಗೆ ಅನುಮತಿ ನೀಡಿ ಆದೇಶ ಹೊರಡಿಸಲಾಗಿದೆ.
ಡಿಕೆ ಶಿವಕುಮಾರ್ ವಿರುದ್ದದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆ ಸಂಬಂಧ ಕರ್ನಾಟಕ ಹೈಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ.
ಸಿಬಿಐ ತನಿಖೆ ರದ್ದು ಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇದೀಗ ಡಿಕೆ ಶಿವಕುಮಾರ್ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್ ಸಿಬಿಐ ತನಿಖೆಗೆ ಅಸ್ತು ಎಂದಿದೆ.
ಡಿಕೆ ಶಿವ ಕುಮಾರ್ ಹೈಕೋರ್ಟ್ ಗೆ ತಡವಾಗಿ ಅರ್ಜಿ ಸಲ್ಲಿಸಿದ್ದಾರೆ. ತನಿಖೆ ವಿಳಂಬವಾದರೇ ಸಿಬಿಐಗೆ ನಿರ್ದೇಶನ ನೀಡಬಹದು 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸುವಂತೆ ಸಿಬಿಐಗೆ ಹೈಕೋರ್ಟ್ ಸೂಚಿಸಿದೆ.
Saval TV on YouTube