ಚಿತ್ರದುರ್ಗ : ಬೈಕಿಗೆ ಅಡ್ಡಬಂದ ನಾಯಿಯನ್ನು ತಪ್ಪಿಸಲು ಮುಂದಾದ ಎಎಸ್‌ಐ ಬೈಕ್‌ನಿಂದ ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಕ್ರಾಸ್ ಬಳಿ ನಡೆದಿದೆ.
ಪರಶರಾಂಪುರ ಪೊಲೀಸ್ ಠಾಣೆಯ ಎಎಸ್‌ಐ ಮಂಜುನಾಥ್ (50) ಮೃತ ದುರ್ದೈವಿ. ಐಮಂಗಲ ಪೊಲೀಸ್ ತರಬೇತಿ ಶಾಲೆಯಿಂದ ವಾಪಸ್ಸಾಗುವಾಗ ಅಪಘಾತ ಸಂಭವಿಸಿದೆ.
ಬೈಕ್‌ನಲ್ಲಿದ್ದ ಮತ್ತೋರ್ವ ಪೊಲೀಸ್ ಪೇದೆ ಸೂರ್ಯಪ್ರಭಾಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















