ಮನೆ ರಾಜ್ಯ ಬೈಕ್-ಆ್ಯಂಬುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ತೀವ್ರ ಗಾಯ

ಬೈಕ್-ಆ್ಯಂಬುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ತೀವ್ರ ಗಾಯ

0

ಚಿಕ್ಕಮಗಳೂರು: ಬೈಕ್ ಹಾಗೂ ಆಂಬ್ಯುಲೆನ್ಸ್ ಮುಖಾಮುಖಿ ಡಿಕ್ಕಿಯಾಗಿ ಸವಾರಿಬ್ಬರು ತೀವ್ರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಸಬ್ಬೆನಹಳ್ಳಿ ರಾಷ್ಟ್ರೀಯ ಹೆದ್ದಾರಿ ಬಳಿ ಸೋಮವಾರ ನಡೆದಿದೆ.

ಬೈಕ್‌ ಸವಾರಿಬ್ಬರು ಬೇಲೂರಿನ ಮೂಲದವರು ಎಂದು ತಿಳಿದು ಬಂದಿದೆ.

ಚಿಕ್ಕಮಗಳೂರಿಗೆ ರೋಗಿಯನ್ನು ಬಿಟ್ಟು ಮಂಗಳೂರಿಗೆ ಹೋಗುತ್ತಿದ್ದ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಢಿಕ್ಕಿ ಹೊಡೆದಿದೆ. ಈ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರಿಗೂ ತೀವ್ರ ಗಾಯಗಳಾಗಿದ್ದು, ಮೂಡಿಗೆರೆಯಲ್ಲಿ ಪ್ರಥಮ ಚಿಕಿತ್ಸೆ ಕೊಟ್ಟು ಹೆಚ್ಚಿನ ಚಿಕಿತ್ಸೆಗೆ ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ

ಬಣಕಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.

ಹಿಂದಿನ ಲೇಖನರುದ್ರ ಸಂಭವ
ಮುಂದಿನ ಲೇಖನನಾನು ಹಿಟ್‌ ಆ್ಯಂಡ್‌ ರನ್‌ ಮಾಡಿಲ್ಲ, ಇದೊಂದು ಆಕಸ್ಮಿಕ ಘಟನೆ: ನಟ ನಾಗಭೂಷಣ್‌