ಮನೆ ಸುದ್ದಿ ಜಾಲ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ – ಹೆಡ್‌ಕಾನ್ಸ್‌ಟೇಬಲ್‌ ಸ್ಥಳದಲ್ಲೇ ಸಾವು

ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ – ಹೆಡ್‌ಕಾನ್ಸ್‌ಟೇಬಲ್‌ ಸ್ಥಳದಲ್ಲೇ ಸಾವು

0

ಹಾಸನ : ಬೈಕ್‌ ಹಾಗೂ ಸಾರಿಗೆ ಬಸ್ ನಡುವೆ ನಡೆದ ಅಪಘಾತದಲ್ಲಿ ಹೆಡ್‌ಕಾನ್ಸ್‌ಟೇಬಲ್‌ ಸಾವನ್ನಪ್ಪಿದ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿದ್ದ ಬೀರಲಿಂಗ (41) ಮೃತಪಟ್ಟ ಮುಖ್ಯಪೇದೆ ಎಂದು ತಿಳಿದುಬಂದಿದೆ.

ಮಧ್ಯಾಹ್ನ ಪೊಲೀಸ್ ಕ್ವಾಟರ್ಸ್‌ನಲ್ಲಿರುವ ಮನೆಗೆ ಊಟಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಸಾರಿಗೆ ಬಸ್‌ ಬೈಕ್‌ಗೆ ಡಿಕ್ಕಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಬೀರಲಿಂಗ ಅವರನ್ನು ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಠಾಣೆ ‌ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.