ಮನೆ ಅಪರಾಧ ಮೋರಿಗೆ ಬೈಕ್ ಡಿಕ್ಕಿ: 10ನೇ ತರಗತಿ ವಿದ್ಯಾರ್ಥಿ ಸಾವು

ಮೋರಿಗೆ ಬೈಕ್ ಡಿಕ್ಕಿ: 10ನೇ ತರಗತಿ ವಿದ್ಯಾರ್ಥಿ ಸಾವು

0

ಸುಬ್ರಹ್ಮಣ್ಯ: ಸವಾರನ ನಿಯಂತ್ರಣ ತಪ್ಪಿ ಬೈಕ್ ರಸ್ತೆ ಬದಿಯ ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಧರ್ಮಸ್ಥಳ – ಇಚ್ಲಂಪಾಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೇರಡ್ಕ ಸಮೀಪ ಜ.17ರ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

Join Our Whatsapp Group

ಪೇರಡ್ಕದ ಖಾಸಗಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ, ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ ಆಶಿಶ್(16) ಮೃತ ವಿದ್ಯಾರ್ಥಿ.

ವಿದ್ಯಾರ್ಥಿ ಮನೆಯಿಂದ ಶಾಲೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಗಾಯಗೊಂಡ ಬಾಲಕನನ್ನು ಕಡಬದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಗಂಭೀರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.