ಮನೆ ಅಪರಾಧ ಎತ್ತಿನಬಂಡಿಗೆ ಬೈಕ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಸಾವು

ಎತ್ತಿನಬಂಡಿಗೆ ಬೈಕ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಸಾವು

0

ಹಾವೇರಿ: ಎತ್ತಿನಬಂಡಿಗೆ ಬೈಕ್ ಡಿಕ್ಕಿಯಾಗಿ ಬೈಕ್ ​ನಲ್ಲಿದ್ದ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ನಡೆದಿದೆ.

Join Our Whatsapp Group

25 ವರ್ಷದ ಶಶಿಕುಮಾರ ಉಪ್ಪಾರ, 23 ವರ್ಷದ ಆಕಾಶ ಬಿರಾದಾರ ಮತ್ತು 23 ವರ್ಷದ ದರ್ಶನ ಮೃತ ದುರ್ದೈವಿಗಳು.

ಇಬ್ಬರು ವಿದ್ಯಾರ್ಥಿಗಳು ಸೇರಿ ಬೈಕ್​ನಲ್ಲಿ ಮೂವರು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಜಾತ್ರೆಗೆ ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇವರು ಹನುಮನಮಟ್ಟಿ ಗ್ರಾಮದಿಂದ ಮೈಲಾರ ಜಾತ್ರೆಗೆ ಹೊರಟಿದ್ದಾಗ ಈ ದುರ್ಘಟನೆ ನಡೆದಿದೆ.

ಆಕಾಶ ಮತ್ತು ದರ್ಶನ ಮೂರನೇ ವರ್ಷದ ಬಿಎಸ್ಸಿ ಅಗ್ರಿ ಓದುತ್ತಿದ್ದರು. ಶಶಿಕುಮಾರ ಹನುಮನಮಟ್ಟಿ ಗ್ರಾಮದಲ್ಲಿ ಹೋಟೆಲ್​ ಕೆಲಸ ಮಾಡುತ್ತಿದ್ದ. ತಡರಾತ್ರಿ ಎತ್ತಿನಬಂಡಿಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.