ಮುಧೋಳ: ಸರ್ಕಾರಿ ಸಾರಿಗೆ ಸಂಸ್ಥೆಯ ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರ ಹೊರವಲಯದ ಮಂಟೂರ ಬೈ ಪಾಸ್ ಬಳಿ ಸೋಮವಾರ(ಡಿ.9) ಬೆಳಗ್ಗೆ ಸಂಭವಿಸಿದೆ.
ಮುಧೋಳದಿಂದ ಬೀಳಗಿ ಮಾರ್ಗವಾಗಿ ತೆರಳುತ್ತಿದ್ದ ಬಸ್ ಗೆ ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಹಾಗೂ ಹಿಂಬದಿ ಸವಾರರಿಗೆ ಗಂಭೀರವಾಗಿ ಗಾಯಗಳಾಗಿದ್ದು ಚಿಕಿತ್ಸೆಗಾಗಿ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡವರ ಹೆಸರು ತಿಳಿದುಬಂದಿಲ್ಲ. ಮುಧೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.