ಮನೆ ಅಪರಾಧ ಕಾರಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಕಾರಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

0

ಬೆಳಗಾವಿ: ಚಲಿಸುತ್ತಿದ್ದ ಕಾರಿಗೆ ಹಿಂದಿನಿಂದ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೊಟಬಾಗಿ ಸಮೀಪ ನಡೆದಿದೆ.

Join Our Whatsapp Group

ಬೈಕ್ ಸವಾರ ಶಿವಾನಂದ ಭೂಸಗೋಳ ಮೃತ ವ್ಯಕ್ತಿ.

ರಸ್ತೆ ಹಂಪ್ ಹತ್ತಿರ ನಿಧಾನವಾಗಿ ಚಲಿಸುತ್ತಿದ್ದ ಇಂಡಿಕಾ ಕಾರಿಗೆ ವೇಗವಾಗಿ ಬಂದು ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

ಸ್ಥಳಕ್ಕಾಗಮಿಸಿದ ಹುಕ್ಕೇರಿ ಪೋಲಿಸ್ ಇನ್ಸ್ಪೆಕ್ಟರ್ ರಫೀಕ ತಹಸೀಲ್ದಾರ ಮತ್ತು ಸಿಬ್ಬಂದಿಗಳಾದ ಮಂಜುನಾಥ ಕಬ್ಬೂರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಿಂದಿನ ಲೇಖನಗ್ಯಾರಂಟಿ ಯೋಜನೆ ಜಾರಿಯಾಗದಿದ್ದರೆ ಅರಾಜಕತೆ ಸೃಷ್ಠಿ: ಬಿ.ವೈ.ವಿಜಯೇಂದ್ರ
ಮುಂದಿನ ಲೇಖನಜನರು ಸಿಡಿದೇಳುವ ಮುನ್ನ ಗ್ಯಾರಂಟಿಗಳನ್ನು ಜಾರಿ ಮಾಡಿ: ಸಿ.ಟಿ ರವಿ