ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕೋಣಾಲು ಗ್ರಾಮದ ಕೋಲ್ಪೆ ಎಂಬಲ್ಲಿ ಬೈಕೊಂದು ನಿಯಂತ್ರಣ ಕಳೆದುಕೊಂಡು ಲಾರಿಯೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದೀಕ್ಷಿತ್ (23) ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ.
ಕರೋಪಾಡಿ ನಿವಾಸಿ ಹರಿಶ್ಚಂದ್ರ ಅವರ ಮಗನಾಗಿರುವ ದೀಕ್ಷಿತ್, ಗುರುವಾರ ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ಕೋಲ್ಪೆ ಮಸೀದಿ ಬಳಿ ಬೈಕ್ ಸವಾರನ ಹತೋಟಿ ತಪ್ಪಿ ಲಾರಿಯ ಮುಂಭಾಗಕ್ಕೆ ಢಿಕ್ಕಿ ಹೊಡೆದಿತ್ತು.
ಈ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸತ್ರೆಗೆ ದಾಖಲಿಸಲಾಯಿತ್ತಾದರೂ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆಂದು ಕೋಲ್ಪೆ ನಿವಾಸಿ ಇಸ್ಮಾಯಿಲ್ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.