ಭಾರತೀನಗರ : ಜೂನ್ ಎರಡು ಪಂಕ್ಚರ್ ಆಗಿ ನಿಂತಿದ್ದ ಟ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿಗೆ ಸಮೀಪದ ಮೂಡಿನ ಹಳ್ಳಿ ಗೇಟ್ ಬಳಿ ಭಾನುವಾರ ರಾತ್ರಿ ನಡೆದಿದೆ.
ಹೆಚ್. ಹೊಸಹಳ್ಳಿ ಗ್ರಾಮದ ನಿವಾಸಿ ಮಲ್ಲೇಶ್ (50) ಮೃತಪಟ್ಟವರು.
ಈತ ಹೊಸಹಳ್ಳಿ ಗ್ರಾಮದಿಂದ ತೊರೆಬೊಮ್ಮನಹಳ್ಳಿ ಮಾರ್ಗವಾಗಿ ಕೆ.ಎಂ. ದೊಡ್ಡಿಗೆ ಬೈಕ್ ನಲ್ಲಿ ಬರುವಾಗ ಕತ್ತಲೆ ಇದ್ದ ಕಾರಣ ಪಂಕ್ಚರ್ ಆಗಿ ನಿಂತಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದ್ದಾರೆ.
ಪರಿಣಾಮ ತೀವ್ರ ಗಾಯಗೊಂಡ ಅವರು ಸ್ಥಳದಲ್ಲಿ ಸಾವನ್ನು ಒಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕೆ.ಎಂ. ದೊಡ್ಡಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ .
Saval TV on YouTube