ತುಮಕೂರು: ಟ್ರ್ಯಾಕ್ಟರ್ ನ ಟ್ರೈಲರ್ ಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ಓಬಳಾಪುರ ಗೇಟ್ ಬಳಿ ಮಂಗಳವಾರ (ಜ.7) ಸಂಭವಿಸಿದೆ.
ಮಹಮದ್ ಆಸೀಫ್ (12 ) ಮಮ್ತಾಜ್ (38 )ಶಾಖೀರ್ ಹುಸೇನ್ (48 ) ಮೃತರು. ಮೃತರು ಮಧುಗಿರಿ ತಾಲ್ಲೂಕಿನ ಪುರವರದ ಗುಡ್ಡೇನಹಳ್ಳಿ ಗ್ರಾಮದವರು ಎನ್ನಲಾಗಿದೆ.
ಮೂವರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಟ್ರ್ಯಾಕ್ಟರ್ ನ ಟ್ರೈಲರ್ ಗೆ ಗುದ್ದಿ ಅಪಘಾತ ಸಂಭವಿಸಿದೆ ಡಿಕ್ಕಿಯ ರಭಸಕ್ಕೆ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.. ಘಟನೆ ಸಂಬಂಧ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಎಸ್ಪಿ ಅಶೋಕ್ ವೆಂಕಟ್, ಡಿವೈಎಸ್ಪಿ ಚಂದ್ರಶೇಖರ್ ಹಾಗೂ ಗ್ರಾಮಾಂತರ ಸಿಪಿಐ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.