ಚಾಮರಾಜನಗರ: ನಿಯಂತ್ರಣ ತಪ್ಪಿ ಮರವೊಂದಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿರುವ ಘಟನೆ ಯಳಂದೂರು ತಾಲೂಕಿನ ಗುಂಬಳ್ಳಿ ಬಳಿ ನಡೆದಿದೆ.
ಯಳಂದೂರು ತಾಲೂಕಿನ ಕೃಷ್ಣಾಪುರದ ಮಹೇಶ್(24) ಮೃತ ಯುವಕ.
ಯುವಕ ಎಳನೀರು ಕೀಳುವ ಕೆಲಸ ಮಾಡುವ ಜೊತೆಗೆ ರೀಲ್ಸ್ ಮಾಡುವ ಹವ್ಯಾಸ ಬೆಳೆಸಿಕೊಂಡಿದ್ದ.
ಯಳಂದೂರು ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Saval TV on YouTube